ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲ, ಬೆಳೆ ನಷ್ಟ, ಸಾಲ ಹಿನ್ನೆಲೆಯಲ್ಲಿ 15 ತಿಂಗಳಲ್ಲೇ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಕಂದಾಯ ಇಲಾಖೆಯ ಮಾಹಿತಿ ಪ್ರಕಾರ, 2023 ಏಪ್ರಿಲ್ 1ರಿಂದ 2024 ಜುಲೈ 4ರೊಳಗೆ ಒಟ್ಟು 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ 122, ಹಾವೇರಿಯಲ್ಲಿ 120, ಧಾರವಾಡದಲ್ಲಿ 101 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.
ಒಟ್ಟು 1,003 ಆತ್ಮಹತ್ಯೆ ಪ್ರಕರಣಗಳಲ್ಲಿ ರೈತನ ಕುಟುಂಬ ಪರಿಹಾರಧನ ಪಡೆಯಲು ಅರ್ಹ ಎಂದು ಪರಿಗಣಿಸಲಾಗಿದೆ. ವಿವಿಧ ಕಾರಣಗಳಿಗಾಗಿ 161 ಪ್ರಕರಣಗಳು ಅರ್ಹವಲ್ಲವೆಂದು ತಿರಸ್ಕರಿಸಲಾಗಿದೆ. ಈ ಪೈಕಿ, ಈಗಾಗಲೇ 994 ರೈತರ ಕುಟುಂಬಗಳಿಗೆ ಪರಿಹಾರಧನ ವಿತರಿಸಲಾಗಿದೆ. 18 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲು ಬಾಕಿಯಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.