ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ. ರೈತ ಹಂತಕ Indian National Congress – Karnataka ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.
ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ, ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ದುಡ್ಡಿಲ್ಲ, ಸರ್ಕಾರಿ ನೌಕರರ ವೇತನ ಹೆಚ್ಚಳವಿಲ್ಲ, ಗೃಹಲಕ್ಷಿ ಹಣ ಬರುತ್ತಿಲ್ಲ, ರೈತರಿಗೆ ಪ್ರೋತ್ಸಾಹಧನವಿಲ್ಲ, Outgoing CM Siddaramaiah CM Of Karnataka ನವರ ಏಕೈಕ ಸಾಧನೆ ಅಂದರೆ ಅದು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನ ಅಧೋಗತಿಗೆ ತಳ್ಳಿರುವುದು ಎಂದು ಕಿಡಿಕಾರಿದ್ದಾರೆ.