ಬೆಳಗಾವಿ: ಜಿಲ್ಲೆಯಲ್ಲಿ 132 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಕೋಹಳಿ ಗ್ರಾಮದ ರವಿ ಶಿಂಗೆ, ಉಗಾರ ಬಿ.ಕೆ ಗ್ರಾಮದ ಮಹಾದೇವ ಕಾಂಬಳೆ, ಕಮರಿ ಗ್ರಾಮದ ಪ್ರದೀವ್ ಕರಡಿ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ ಸೇರಿದಂತೆ 12 ಮಂದಿ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಆದೇಶಿಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ: ‘ಸಹ-ಪಠ್ಯಚಟುವಟಿಕೆ ಸ್ಪರ್ಧೆ’ಗೆ ವೇಳಾಪಟ್ಟಿ ಪ್ರಕಟ
ಅಂದಹಾಗೆ ಬೆಳಗಾವಿ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಈ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. 132 ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಆರೋಪಿಗಳನ್ನು ಗಡಿಪಾರು ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡುವಂತ ಕೆಲಸ ಮಾಡಿದ್ದಾರೆ.
ಈ ‘ಗೂಗಲ್ ಸೇವೆ’ ಶಾಶ್ವತವಾಗಿ ಬಂದ್ ; ನಿಮ್ಮ ಅಮೂಲ್ಯ ‘ಡೇಟಾ’ ತಕ್ಷಣವೇ ಡೌನ್ಲೋಡ್ ಮಾಡ್ಕೊಳ್ಳಿ