ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,290 ಪ್ರಕರಣಗಳು ದಾಖಲಾಗಿವೆ.
1,290 ನಗದು, ಮದ್ಯ, ಡ್ರಗ್ಸ್ ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿರುವ ಪ್ರಕರಣಗಳು
1,427 ಅಬಕಾರಿ ಇಲಾಖೆ ಘೋರ ಅಪರಾಧ ಅಡಿಯಲ್ಲಿ ದಾಖಲಾದ ಪ್ರಕರಣಗಳು
1,469 ಪರವಾನಗಿ ಉಲ್ಲಂಘನೆ ಅಡಿಯಲ್ಲಿ ದಾಖಲಾದ ಪ್ರಕರಣಗಳು
98 ಎನ್‌ಡಿಪಿಎಸ್ ಅಡಿ ದಾಖಲಾದ ಪ್ರಕರಣಗಳು
6,454 ಕರ್ನಾಟಕ ಅಬಕಾರಿ ಕಾಯ್ದೆ 1965ರ ಸೆಕ್ಷನ್ 15(ಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು
855 ವಶಪಡಿಸಿಕೊಳ್ಳಲಾಗಿರುವ ವಿವಿಧ ರೀತಿಯ ವಾಹನಗಳು