ಸುಭಾಷಿತ :

Monday, February 17 , 2020 5:11 AM

‘ಫೆ.26ರಿಂದ ಮಾರ್ಚ್ 4’ರ ವರೆಗೆ 12ನೇ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ'(BIFFES)


Thursday, January 9th, 2020 8:58 pm

ಬೆಂಗಳೂರು : 12ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದಿನ ಫೆಬ್ರವರಿ 26ರಿಂದ ಮಾರ್ಚ್ 4ರ ವರೆಗೆ ಎಂಟು ದಿನಗಳ ಕಾಲ ನಡೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಚಲನಚಿತ್ರೋತ್ಸವ ಸಂಘಟನಾ ಸಮಿತಿ ನಿರ್ಧರಿಸಿದೆ.

ಈ ಕುರಿತಂತೆ ಇಂದು ಚಿತ್ರೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿ ವಿವರಗಳನ್ನು ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಫೆಬ್ರವರಿ 26ರಂದು ಸಂಜೆ ಬೆಂಗಳೂರಿನ ಕಂಠೀರವ ಒಳಾಂಗಣದಲ್ಲಿ ವಿದೇಶಿ ನಿರ್ದೇಶಕರು, ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕನ್ನಡ ಚಿತ್ರರಂಗದ ನಿರ್ಮಾಪಕ, ನಿರ್ದೇಶಕರ ಉಪಸ್ಥಿತಿಯಲ್ಲಿ ಚಿತ್ರೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಫೆಬ್ರವರಿ 26ರಿಂದ ಆರಂಭಗೊಳ್ಳಲಿರುವ 12ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 4ರಂದು ಕೊನೆಗೊಳ್ಳಲಿದೆ. ಅಲ್ಲಿಯ ವರೆಗೆ ಒರಾಯನ್ ಮಾಲ್ ನಲ್ಲಿರುವ ಹನ್ನೊಂದು ಚಿತ್ರಮಂದಿರಗಳಲ್ಲಿ 50 ದೇಶಗಳ ಸುಮಾರು 200 ಚಲನಚಿತ್ರಗಳು ಪ್ರದರ್ಶನವಾಗಲಿವೆ.

ಕರ್ನಾಟಕ ಸರ್ಕಾರ ಕಳೆದ 11 ವರ್ಷಗಳಿಂದ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಡೆಸುತ್ತಿದ್ದು, ಬೆಂಗಳೂರಿನಲ್ಲಿ ಚಿತ್ರಜಗತ್ತನ್ನು ತೋರಿಸುವುದೇ ಅಲ್ಲದೇ ಚಲನಚಿತ್ರ ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡುತ್ತಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಈ ಚಲನಚಿತ್ರೋತ್ಸವ ನಡೆಯುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions