ತೆಲಂಗಾಣ: ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಪರಿಣಾಮ 13 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತೆ, 6 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೆಲವು ತಿಂಗಳ ಹಿಂದೆ ಅನೇಕ ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದಳು. ಆದರೆ, ಮಂಗಳವಾರವಷ್ಟೇ ಈ ವಿಚಾರ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಾಲಕಿ ಜ್ವರದಿಂದ ಬಳಲುತ್ತಿದ್ದಳು. ಹೀಗಾಗಿ, ತಾಯಿ ಆಕೆಯನ್ನು ಸೋಮವಾರ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಈ ವೇಳೆ ಬಾಲಕಿ ಆರು ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನು ಅನುಸರಿಸಿ, ಅಪ್ರಾಪ್ತಳನ್ನು ವಿಚಾರಣೆಗೆ ಒಳಪಡಿಸಿದಾಗ, ಗ್ರಾಮದ ಮೂವರು ವ್ಯಕ್ತಿಗಳು ತನ್ನ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ.
ಈ ಸಂಬಂದ ಸಂತ್ರಸ್ತೆಯ ಕುಟುಂಬದವರು ನೆಲ್ಲಿಕುದೂರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.
BIGG NEWS : ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಲು ‘ ರಾಜ್ಯ ಸರ್ಕಾರ ಸಿದ್ಧತೆ ‘
ALEART: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಹತ್ವದ ಮಾಹಿತಿ: ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಹೀಗಿದೆ
ಗಮನಿಸಿ: ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್ ಪಡೆದುಕೊಳ್ಳಲು ಹೀಗೆ ಮಾಡಿ