ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru )ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಪಿಎಫ್ಐ (PFI) ಕಾರ್ಯಕರ್ತರನ್ನು ಪತ್ತೆ ಪತ್ತೆಹಚ್ಚಿ ಕೊಟ್ಟವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (NIA ) ನಗದು ಬಹುಮಾನ ಘೋಷಿಸಿದೆ.
BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ
ಹತ್ಯೆ ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡ ಶಂಕೆ ಹಿನ್ನೆಲೆ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅಡಗಿರುವ ಬಗ್ಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (National Investigation Agency ) ತಮ್ಮ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ
ಈ ನಿಟ್ಟಿನಲ್ಲಿ ಸುಳ್ಯ ಬುದು ಹೌಸ್ನ ಎಸ್. ಮುಹಮ್ಮದ್ ಮುಸ್ತಫ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್. ತೌಫಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್ ಎಂ.ಆರ್. ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ನೊಟೀಸ್ನಲ್ಲಿ ತಿಳಿಸಿದೆ.
BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು.
BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ
ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು
BIG NEWS : ʻಶ್ರೀಮಂತ ಸಂಸ್ಕೃತಿ ಹೊಂದಿರುವ ದೇಶಕ್ಕೆ ಉಜ್ವಲ ಭವಿಷ್ಯವಿದೆʼ: ಸಿಎಂ ಬೊಮ್ಮಾಯಿ