ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ನಿನ್ನೆಯಿಂದ ಈವರೆಗೆ 14 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆಯಿಂದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿರೋದಾಗಿ ತಿಳಿದು ಬಂದಿದೆ.
ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸದೇ ಇರೋದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ವಿಷಯ ತಿಳಿದು ಕಾರಿಗನೂರು ಗ್ರಾಮಕ್ಕೆ ಡಿಹೆಚ್ಓ ಶಂಕರ್ ನಾಯಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದು, ಜನರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಂಡಿದ್ದಾರೆ.
ಎಚ್ಚರ.! ‘ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್
BREAKING: ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು