ಬೆಳಗಾವಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯ ನಿಯಂತ್ರಣದ ಕ್ರಮದ ನಡುವೆಯೂ ಡೆಂಗ್ಯೂವಿನಿಂದಾಗಿ ಇಂದು 14 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವುದಾಗಿ ತಿಳಿದು ಬಂದಿದೆ.
ಧಾರವಾಡ ಕುಂದಗೋಳದಲ್ಲಿ ಡೆಂಗ್ಯೂವಿನಿಂದ ಬಳಲುತ್ತಿದ್ದಂತ 5 ವರ್ಷದ ಬಾಲಕಿನ್ನು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಈ ಬೆನ್ನಲ್ಲೇ ತೀವ್ರ ಜ್ವರದಿಂದ ಬಳಲುತ್ತಿದ್ದಂತ 14 ವರ್ಷದ ಬಾಲಕಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾದಂತೆ ಆಗಿದೆ.
ಮೃತ 14 ವರ್ಷದ ಬಾಲಕಿಯನ್ನು ಪ್ರಣಾಲಿ ಎಂಬುದಾಗಿ ತಿಳಿದು ಬಂದಿದೆ. ಈ ಬಾಲಕಿ ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದವಳಾಗಿದ್ದಾಳೆ. ಬಾಲಕಿಗೆ ಮೊದಲು ವಾಂತಿ-ಬೇಧಿ ಕಾಣಿಸಿಕೊಂಡಿತ್ತು. ಆ ಬಳಿಕ ಜ್ವರ ಬಂದಿತ್ತು. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ 14 ವರ್ಷದ ಬಾಲಕಿ ಪ್ರಣಾಲಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಆಕೆ ಡೆಂಗ್ಯೂವಿನಿಂದ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಆರೋಗ್ಯ ಇಲಾಖೆಯಿಂದ ಖಚಿತ ಮಾಹಿತಿ ತಿಳಿದು ಬರಬೇಕಿದೆ.
Good News: ಶೀಘ್ರವೇ ‘ಪತ್ರಕರ್ತ’ರಿಗೂ ‘ಆರೋಗ್ಯ ವಿಮೆ’ ಜಾರಿ: ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ ಪ್ರಭಾಕರ್’
ಉತ್ತರ ಕ್ಯಾಲಿಫೋರ್ನಿಯಾದಲ್ಲಿ 1,78,000 ಎಕರೆ ಪ್ರದೇಶಕ್ಕೆ ಬೆಂಕಿ:134 ಕಟ್ಟಡಗಳು ನಾಶ