BIG NEWS : ಭಾರತದಲ್ಲಿ ಒಂದೇ ದಿನ ಕೊರೊನಾಗೆ 147 ಮಂದಿ ಬಲಿ – Kannada News Now


State

BIG NEWS : ಭಾರತದಲ್ಲಿ ಒಂದೇ ದಿನ ಕೊರೊನಾಗೆ 147 ಮಂದಿ ಬಲಿ

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ 6,767 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 147 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ನಿನ್ನೆ ಒಂದೇ ದಿನ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಈ ಮೂಲಕ ಭಾರತದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3,867 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 6,767 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,31,868 ಕ್ಕೆ ಏರಿಕೆಯಾಗಿದೆ.  ಈ ಪೈಕಿ 54,440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 73,560 ಮಂದಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.