ಹುಬ್ಬಳ್ಳಿ : ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ.
ತಾಲೂಕಿನ ಬ್ಯಾಹಟ್ಟಿ ಬಳಿ ಬಸ್ ಚಲಿಸುತ್ತಿರುವಾಗಲೇ ಬಸ್ಸಿನ ಪಾಟಾ ಕಟ್ ಆಗಿದೆ. ಕೂಡಲೇ ಬಸ್ ಅನ್ನು ಚಾಲಕ ಎಷ್ಟೇ ನಿಯಂತ್ರಣಕ್ಕೆ ತರಬೇಕೆಂದರು ಸಾಧ್ಯವಾಗಿಲ್ಲ. ತಕ್ಷಣ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಾಯಗಳಾಗಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇನ್ನು ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮೀಣ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.