ಬಳ್ಳಾರಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರಿಂದ ಜನರ ಜೀವನ ಆಸ್ತವ್ಯಸ್ತವಾಗಿದೆ. ಇದೀಗ ಬಳ್ಳಾರಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು ಸಿಡಿಲಿಗೆ ಹದಿನೈದು ಕುರಿಗಳು ಸಾವನ್ನಪ್ಪಿದ್ದು, ಇಬ್ಬರು ಕುರಿಗಾಹಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೌದು ಇಂದು ಸಂಜೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೋಡಾಲ್ ಗ್ರಾಮದಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಈ ವೇಳೆ ಸಿಡಿಲಿಗೆ 15 ಕುರಿಗಳು ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಕುರಿಗಾಹಿಗಳಾದ ಉಳೂರು ಗ್ರಾಮದ ಬಸಪ್ಪ ಹಾಗೂ ಕರಿಮಿಂಚಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಕೂಡಲೇ ಕುರಿಗಾಹಿಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.