ಶಿವಮೊಗ್ಗ : ಸರ್ಕಾರಿ ಶಾಲೆಗಳಿಗೆ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಸದ್ಯದಲ್ಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದಿದ್ದಾರೆ.ಇನ್ನೂ ಅಂಬೇಡ್ಕರ್ ಹೆಸರಿನಲ್ಲಿ 100 ಹಾಗೂ ಕನಕದಾರ ಹೆಸರಿನಲ್ಲಿ 50 ಹಾಸ್ಟೆಲ್ ತೆರೆಯಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ
ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲೇ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಿನ್ನೆ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಈ ಯೋಜನೆ ಮೂಲಕ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ, ಇದರಿಂದ ಮಹಿಳೆಯರ ಸಬಲೀಕರಣವಾಗಲಿದೆ, ಈ ಯೋಜನೆಯನ್ನು ಈ ವರ್ಷವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದ್ಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಿಳಾ ಆಯೋಗವನ್ನು ಬಲಪಡಿಸಬೇಕೆಂಬ ಬೇಡಿಕೆ ಕೇಳಿಬಂದಿದ್ದು, ನಾವು ನಿರ್ಭಯ ಕಾನೂನು ಜಾರಿಗೊಳಿಸಲು ಸಿದ್ದರಾಗಿದ್ದೇವೆ. ಕಾನೂನಿನ ಬಗ್ಗೆ ಪುರುಷರಿಗೆ ಮಾಹಿತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಾವು ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ
Good News : ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವೇತನ ಬಿಡುಗಡೆ