ಮಹಾರಾಷ್ಟ್ರ: 15 ವರ್ಷದ ಬಾಲಕನೊಬ್ಬ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಈ ಬಾಲಕ ವ್ಯಕ್ತಿಯೊಬ್ಬನ ಬಳಿ ಜಗಳವಾಡಿದ್ದ. ಈ ವೇಳೆ ಬಾಲಕ ವ್ಯಕ್ತಿಯಿಂದ ಹಲ್ಲೆಗೆ ಒಳಗಾಗಿದ್ದ. ಇದರ ಪ್ರತೀಕಾರವಾಗಿ, ಬಾಲಕ ವ್ಯಕ್ತಿಯ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೆ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಸೊಸೈಟಿಯ ಆವರಣದಲ್ಲಿ ಒಂಬತ್ತು ವರ್ಷದ ಬಾಲಕಿಯ ಶವ ಪತ್ತೆಯಾದ ನಂತರ ಘಟನೆ ಮುನ್ನೆಲೆಗೆ ಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಪೊಲೀಸ್ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಬಾಲಕನನ್ನು ಗುರುತಿಸಿದ್ದು, ವಶಕ್ಕೆ ಪಡೆದು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದರು.
ಈ ವೇಳೆ ನಡೆದ ಘಟನೆ ಬಾಲಕ ಬಾಯ್ಬಿಟ್ಟಿದ್ದಾನೆ. ʻಎರಡು ದಿನಗಳ ಹಿಂದೆ ಬಾಲಕಿಯ ತಂದೆಯೊಂದಿಗೆ ತನಗೆ ಜಗಳವಾಗಿದೆ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಬಾಲಕನು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಹಲ್ಲೆಗೆ ಪ್ರತೀಕಾರ ತೀರಿಸಿಕೊಳ್ಳಲು ಬಾಲಕ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ನಂತರ ಬ್ಲೇಡ್ನಿಂದ ಕತ್ತು ಸೀಳಿರುವುದಾಗಿ ಹೇಳಿದ್ದಾನೆ.
ಮಹಾತ್ಮ ಫುಲೆ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
BREAKING NEWS: ಪಂಜಾಬಿ ಗಾಯಕ ʻಸಿಧು ಮೂಸೆ ವಾಲಾʼ ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಅರೆಸ್ಟ್
BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಇಬ್ಬರು ʼವೃದ್ಧ ದಂಪತಿಯ ಕತ್ತುಕೊಯ್ದು ಬರ್ಬರ ಹತ್ಯೆʼ | Chitradurga
BIG NEWS : ಇಂದಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿ ಪ್ರವಾಸ | CM Basavaraja Bommai
BREAKING NEWS: ಪಂಜಾಬಿ ಗಾಯಕ ʻಸಿಧು ಮೂಸೆ ವಾಲಾʼ ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಅರೆಸ್ಟ್