ಬೆಂಗಳೂರು: ರಾಜ್ಯದಲ್ಲಿ ಇಂದು 150 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ.
ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 150 ಜನರಿಗೆ ಸೋಂಕು ಪಾಸಿಟಿವ್ ಅಂತ ದೃಢಪಟ್ಟಿರುವುದಾಗಿ ತಿಳಿಸಿದೆ.
ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.
BREAKING: ಏರ್ ಇಂಡಿಯಾ ವಿಮಾನ ಪತನಗೊಂಡ ಕಟ್ಟಡದ ಮೇಲ್ಛಾವಣಿಯಲ್ಲಿ ಕಪ್ಪು ಪೆಟ್ಟಿಗೆ ಪತ್ತೆ | Air India Black Box
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು