ಬೆಂಗಳೂರು: ಶಿಕ್ಷಣ ಇಲಾಖೆಯಿಂದ ( Education Department ) ಪ್ರಾಥಮಿಕ ಶಾಲೆಗಳಲ್ಲಿ ( Primary School ) ಖಾಲಿ ಇದ್ದಂತ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ( Graduate elementary school teacher ) ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ( Competitive Exam ) ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ( Graduate Primary School Teachers Recruitment ) 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಇದೇ ಮೊದಲಿಗೆ 19 ಎಂಜಿನಿಯರಿಂಗ್ ಪದವೀಧರರು ಕೂಡ ಆಯ್ಕೆಯಾಗಿದ್ದಾರೆ.

ವಿದ್ಯುತ್ ಬಿಲ್ ಕಟ್ಟದ ಸರ್ಕಾರಿ ಕಚೇರಿಗಳಿಗೆ BESCOM ಬಿಗ್ ಶಾಕ್: ಬಿಬಿಎಂಪಿ, BWSSBಗೆ ಬಾಕಿ ಪಾವತಿಗೆ ನೋಟಿಸ್

ಈ ಕುರಿತಂತೆ ಟ್ವಿಟ್ ಮಾಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ( Government School ) ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ, ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ನ.14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಇಂದು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು  ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ

ಅಂದಹಾಗೇ ಸಚಿವ ಬಿ.ಸಿ ನಾಗೇಶ್ ಅವರು ನಿನ್ನೆ ಟ್ವಿಟ್ ಮಾಡಿ, ಇದು ಸಂಜೆ 6 ಗಂಟೆಗೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ಹೇಳಿದ್ದರು. ಇದಕ್ಕೂ ಮುನ್ನಾ ಈ ವಾರ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿಯೂ ಘೋಷಿಸಿದ್ದರು. ಅದರಂತೆ ಇಂದು ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ಪಟ್ಟಿಯನ್ನು ನೋಡಬಹುದಾಗಿದೆ.

BREAKING NEWS: ಹೈದರಾಬಾದ್ ನ ಕಾಲೇಜಿನ ಲ್ಯಾಬ್ ನಲ್ಲಿ ರಾಸಾಯನಿಕ ಅನಿಕ ಸೋರಿಕೆ: 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Share.
Exit mobile version