ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ನಾಳೆ ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ.
ಈ ಕುರಿತು ನಾಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಅವರು, ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಸಭಾಂಗಣದಲ್ಲಿ ಸುದ್ಧಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Primary School Teacher Recruitment ) ಕುರಿತು ಮಾಹಿತಿಯನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳಲಿದ್ದಾರೆ.
BREAKING: ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ: ಚಿಲುಮೆ ಸಂಸ್ಥೆಯ ವಿರುದ್ಧ FIR ದಾಖಲು
ಅಂದಹಾಗೇ ನವೆಂಬರ್ 15, 2022ರಂದು ಶಿಕ್ಷಣ ಸಚಿವರು ಟ್ವಿಟ್ಟರ್ ನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Graduate Primary School Teachers Recruitment ) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂಬುದಾಗಿ ಹೇಳಿದ್ದರು. ಈ ಬೆನ್ನಲ್ಲೇ ನಾಳೆ ಸಂಜೆ 5.30ಕ್ಕೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟ ಮಾಡಲಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು.
— B.C Nagesh (@BCNagesh_bjp) November 15, 2022