ಬೆಂಗಳೂರು : 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ ವಿಧಾನಸೌಧದ ಮುಂಭಾಗ ನಡೆಯುವ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದ್ದು, ಮಾರ್ಚ್ 7 ರವರೆಗೆ ನಡೆಯಲಿದೆ. ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ.
BREAKING:ಬೈಸಿಕಲ್ ಸವಾರಿ ಮಾಡುವಾಗ ಅಪಘಾತ: ‘ಇಂಟೆಲ್‌ನ’ ಮಾಜಿ ನಿರ್ದೇಶಕ ಅವತಾರ್ ಸೈನಿ ನಿಧನ
ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.
ನಮ್ಮ ಮೆಟ್ರೋ: ಎರಡು ನಿಲ್ದಾಣಗಳಲ್ಲಿ ಮಹಿಳಾ ಚಾಲಿತ ‘ಇ-ಆಟೋಗಳ’ ಪ್ರಾರಂಭ
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಹಲವು ವೈಶಿಷ್ಟ್ಯಗಳಿವೆ. ಕನ್ನಡ ಚಲನಚಿತ್ರರಂಗಕ್ಕೆ 90 ವರ್ಷ ತುಂಬಲಿದ್ದು, ಈ ಸಂಭ್ರಮಾಚರಣೆಯನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಆಚರಿಸಲಾಗುತ್ತಿದೆ. ಕನ್ನಡ ಚಿತ್ರಗಳು ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಎಲ್ಲ ಕಡೆ ಜನಪ್ರಿಯವಾಗುತ್ತಿದ್ದು ಕನ್ನಡ ಚಿತ್ರರಂಗ ನಡೆದು ಬಂದ ದಾರಿ, ಹಾಗೂ ಕನ್ನಡದಲ್ಲಿ ಮೈಲುಗಲ್ಲು ಸ್ಥಾಪಿಸಿದ ಚಾರಿತ್ರಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿವಾದಿಸುವ ವಿಶೇಷ ಚಲನಚಿತ್ರಗಳ ಉತ್ಸವವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ಶಾಲೆಗಳಲ್ಲಿ ‘ನೆಹರು ಸ್ಟ್ರೀಮ್ ಲ್ಯಾಬ್‌ಗಳನ್ನು’ ಸ್ಥಾಪನೆಗೆ ಚಿಂತನೆ: ಸಚಿವ ಬೋಸರಾಜ್