ರಾಯ್ಪುರ (ಛತ್ತೀಸ್ಗಢ): ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಭಾನುವಾರ ಆಘಾತಕಾರಿ ಘಟನೆಯೊಂದು ನಡೆದಿದೆ. 16 ವರ್ಷದ ಬಾಲಕಿಯೊಬ್ಬಳು ವಿಕಲಚೇತನ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಏನಿದು ಘಟನೆ?
ಬಾಲಕಿ ತನ್ನ ಬೈಸಿಕಲ್ನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಿವುಡ ಮತ್ತು ಮಾತು ಬಾರದ ವ್ಯಕ್ತಿ ಅಡ್ಡ ಬಂದಿದ್ದಾನೆ. ಈ ವೇಳೆ ಬಾಲಕಿ ಹಾರ್ನ್ ಮಾಡಿದ್ದಾಳೆ. ಇದಕ್ಕೆ ಆತ ಪ್ರತಿಕ್ರಿಯಿಸಿಲ್ಲ. ಇದರಿಂದ ಕೋಪಗೊಂಡ ಬಾಲಕಿ ತನ್ನ ಬ್ಯಾಗ್ನಲ್ಲಿದ್ದ ಚಾಕುವಿನಿಂದ ಆತನನ್ನು ಇರಿದು ಕೊಂದಿದ್ದಾಳೆ.
ಆಜಾದ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕಲಿಪಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದೀಗ ಬಾಲಕಿಯನ್ನು ಬಂಧಿಸಲಾಗಿದ್ದು, ಆಕೆಯಿಂದ ಅಪರಾಧಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ಡಿ ಸಿ ಪಟೇಲ್ ತಿಳಿಸಿದ್ದಾರೆ.
ಬಾಲಕಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಬಂಧಿತ ಬಾಲಕಿಯನ್ನು ಇಂದು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನನ್ನ ಬಾಯಿ ಮುಚ್ಚಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಸಡ್ಡು
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: 6,000 ಕ್ಕೂ ಹೆಚ್ಚು ಜನರ ಸ್ಥಳಾಂತರ