ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕರು ಗಾಂಜಾ ಹಾಗೂ ಡ್ರಗ್ಸ್ ಮೊರೆ ಹೋಗುತ್ತಿರುವುದು ತೀರ ಆತಂಕಕಾರಿ ಬೆಳವಣಿಗೆಯಾಗಿದೆ ಇದೀಗ ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಮೌಲ್ಯದ 17 ಕೆಜಿ ಗಾಂಜಾ ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ 10 ಲಕ್ಷ ಮೌಲ್ಯದ 17 ಕೆಜಿ ಗಾಂಜಾ ಹಣ ಜಪ್ತಿ ಮಾಡಿಕೊಂಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಅದಿಪನ್ ರಾಜ್ ಹಾಗೂ ವಿಷ್ಣು ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ. ಬಂಧಿತರಿಂದ 10 ಲಕ್ಷ ಮೌಲ್ಯದ 17 ಕೆಜಿ ಗಾಂಜಾ ಹಾಗೂ ನಗರದನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.