ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ತಿಳಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಬಳಿಕ ಪಲ್ಟಿಯಾಗಿ ಬಸ್ ನಲ್ಲಿದ್ದ 17 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಹೌದು KSRTC ಬಸ್ ಪಲ್ಟಿಯಾಗಿ 17 ಜನರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಈ ಒಂದು ಘಟನೆ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಕೂಡಲೇ ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.