Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0922/12/2025 6:45 PM

ಬೆಂಗಳೂರು: “ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಿಎಂಆರ್ ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ 30% ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ” ಎಂದು ತಿಳಿಸಿದರು.

“ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಮಾರ್ಗ ಸೇರಿದಂತೆ 38 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. ಆ ಮೂಲಕ ಬೆಂಗಳೂರಿನಲ್ಲಿ 175 ಕಿ.ಮೀ ಉದ್ದದ ಮಾರ್ಗ ಕಾರ್ಯನಿರ್ವಹಿಸಲಿದೆ. ಇದರ ಹೊರತಾಗಿ ಮಾಗಡಿ ರಸ್ತೆಯಲ್ಲಿ ತಾವರಕೆರೆವರೆಗೆ, ಹೊಸಕೋಟೆ, ಬಿಡದಿ, ನೆಲಮಂಗಲದವರೆಗೆ ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ. ಒಂದು ಕಡೆ ಯೋಜನೆ ಕೈಗೆತ್ತಿಕೊಂಡಿದ್ದು, ಉಳಿದ ಕಡೆಗಳಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ” ಎಂದು ತಿಳಿಸಿದರು.

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್

“ಮುಂದಿನ ತಿಂಗಳು ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಸೇರಿದಂತೆ ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸಿ ಜನರ ಪ್ರಯಾಣಕ್ಕೆ ಅನುಕೂಲವಾಗಲು ಕಾಮಗಾರಿ ವೇಗವಾಗಿ ನಡೆಸುತ್ತಿದೆ. ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಜಮೀನು ಸ್ವಾಧೀನಪಡಿಸಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ವಾಹನ ನಿಲುಗಡೆಗೂ ಅವಕಾಶ ಕಲ್ಪಿಸಬೇಕಿದೆ” ಎಂದರು.

“ಮೂರನೇ ಹಂತದ ಯೋಜನೆ ಟೆಂಡರ್ ಕರೆಯಲಾಗುತ್ತಿದೆ. 25,311 ಸಾವಿರ ಕೋಟಿ ವೆಚ್ಚದ ಈ ಕಾಮಗಾರಿಗೆ, ಜೈಕಾದಿಂದ 15,600 ಕೋಟಿ ಸಾಲ ಮಾಡಲಾಗುತ್ತಿದೆ. ಉಳಿದಂತೆ ಎಲಿವೇಟೆಡ್ ಕಾರಿಡಾರ್ ಗೆ 9,700 ಕೋಟಿ ಮೊತ್ತದ ಟೆಂಡರ್ ಅನ್ನು ಜನವರಿಯಲ್ಲಿ ಕರೆಯಲಾಗುವುದು” ಎಂದು ಮಾಹಿತಿ ನೀಡಿದರು.

ಮೂರನೇ ಹಂತದಲ್ಲಿ ಸಂಪೂರ್ಣ ಮಾರ್ಗ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಮಾಡಲಾಗುವುದೇ ಎಂದು ಕೇಳಿದಾಗ, “ಮೂರನೇ ಹಂತದ ಯೋಜನೆಯಲ್ಲಿ ಸಂಪೂರ್ಣವಾಗಿ ಎಲ್ಲಾ ಮಾರ್ಗದಲ್ಲೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು. ತಾವರೆಕೆರೆ ಬಳಿ ಮೆಟ್ರೋ ನಿಲ್ದಾಣಕ್ಕೆ ಜಾಗ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಾಸನದಿಂದ ಬರುವ ಜನರು ಈ ಮಾರ್ಗವಾಗಿ ಬರುವುದರಿಂದ ಇಲ್ಲೂ ಡಬಲ್ ಡೆಕ್ಕರ್ ಮಾಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

ಅಧಿಕೃತವಾಗಿ ಮಾಹಿತಿ ಬಂದ ನಂತರ ಟನಲ್ ರಸ್ತೆ ಟೆಂಡರ್ ಕುರಿತು ಪ್ರತಿಕ್ರಿಯೆ

ಟನಲ್ ರಸ್ತೆ ಟೆಂಡರ್ ಅಂತಿಮಗೊಂಡಿದ್ದು, ಅದಾನಿ ಕಂಪನಿ ಕಡಿಮೆ ಬಿಡ್ ಮಾಡಿದೆ ಎಂಬ ವರದಿಗಳು ಬಂದಿವೆ ಎಂದು ಕೇಳಿದಾಗ, “ನನಗೆ ಇನ್ನು ಸಂಪೂರ್ಣ ಮಾಹಿತಿ ಬಂದಿಲ್ಲ. ನನಗೆ ಅಧಿಕೃತವಾಗಿ ಪತ್ರ ಬರುವವರೆಗೂ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಸರ್ಕಾರ ನಿಗದಿ ಮಾಡಿದ ಮೊತ್ತಕ್ಕಿಂತ ಹೆಚ್ಚಿನ ಹಣ ಬಿಡ್ ಮಾಡಲಾಗಿದೆ ಎಂದು ಕೇಳಿದಾಗ, “ನಾವು ಯಾರಿಗೂ ಹಣ ನೀಡುವುದಿಲ್ಲ. ಅವರೇ ಹಣ ಬಂಡವಾಳ ಹಾಕಿ ಮಾಡಬೇಕು. ವಿಜೆಎಫ್ ಎಷ್ಟು ಪರ್ಸೆಂಟ್ ನೀಡುತ್ತೇವೆ ಎಂದು ಹೇಳಿದ್ದೇವೋ ಅಷ್ಟನ್ನೇ ನೀಡುತ್ತೇವೆ. ನಾವು ಅಂದಾಜು ಮಾಡಿರುವುದರಲ್ಲಿ 40% ಮಾತ್ರ ನೀಡುತ್ತೇವೆ. ಅದರ ಮೇಲೆ ನಾವು ನೀಡುವುದಿಲ್ಲ. ಮೆಟ್ರೋಗೆ ತಗುಲುವ ವೆಚ್ಚ ಪರಿಶೀಲಿಸಿದೆ. ಬಾಂಬೆಯಲ್ಲಿ ಆಗುತ್ತಿರುವ ವೆಚ್ಚದ ಮಾಹಿತಿ ತರಿಸಿಕೊಂಡೆ. ಬಾಂಬೆಯಲ್ಲಿ ಪ್ರತಿ ಕಿ.ಮೀಗೆ 1,200 ಕೋಟಿ ಆಗುತ್ತಿದೆ” ಎಂದು ತಿಳಿಸಿದರು.

ಡಿ.25ರಿಂದ 27ರವರೆಗೆ ಸಾಗರದಲ್ಲಿ ಅಯ್ಯಪ್ಪಸ್ವಾಮಿ ದೀಪೋತ್ಸವ- ಅಧ್ಯಕ್ಷ ಆರ್.ಚಂದ್ರು

ಚಿತ್ರದುರ್ಗ: ಗ್ರಾಮೀಣ ಭಾಗದ‌ ಜನರಿಗೂ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದೇವೆ- ಸಚಿವ ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM1 Min Read

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM1 Min Read

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM1 Min Read
Recent News

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

BREAKING : ರಾಜ್ಯಗಳಿಗೆ ವಾಣಿಜ್ಯ ಬಳಕೆಯ LPG ಸಿಲಿಂಡರ್ ಹಂಚಿಕೆ ಶೇ.50ಕ್ಕೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

22/03/2026 5:31 AM
State News
KARNATAKA

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow0922/03/2026 5:39 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜನಗಣತಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ವಿಚಾರದಲ್ಲಿ ಸರ್ಕಾರ ಮಹತ್ವದ…

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

22/03/2026 5:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.