ನವದೆಹಲಿ: ಏಪ್ರಿಲ್ 19 ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 18 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಂಕೇರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಮತ್ತಷ್ಟು ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ.