Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸೌರ ಪಂಪ್‌ಸೆಟ್‌’ಗಾಗಿ ನೋಂದಣಿ ಆರಂಭ: ರಾಜ್ಯದ ರೈತರೇ ಹೀಗೆ ಅರ್ಜಿ ಸಲ್ಲಿಸಿ
KARNATAKA

‘ಸೌರ ಪಂಪ್‌ಸೆಟ್‌’ಗಾಗಿ ನೋಂದಣಿ ಆರಂಭ: ರಾಜ್ಯದ ರೈತರೇ ಹೀಗೆ ಅರ್ಜಿ ಸಲ್ಲಿಸಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ಲಕ್ಷ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ.

ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್‌) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

“ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಲಕ್ಷ ರೈತರು ಸೌರಪಂಪ್‌ ಸೆಟ್‌ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್‌/ ಆ್ಯಪ್‌ನಲ್ಲಿ ನೋಂದಣಿ ಮಾಡಿದ್ದಾರೆ,”ಎಂದು ಗುಪ್ತಾ ತಿಳಿಸಿದರು.

“ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ.ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿದ್ದು, ರಾಜ್ಯದ ಎಲ್ಲ ಎಸ್ಕಾಂಗಳು ಪೂರಕವಾಗಿ ಕೆಲಸ ಮಾಡುತ್ತಿವೆ,”ಎಂದರು.

“ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಜತೆಗೆ, ಕುಸುಮ್‌ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆಗಳಿಗೆ ಪರದಾಡಬೇಕಿಲ್ಲ,”ಎಂದು ವಿವರಿಸಿದರು.

ಕುಸುಮ್‌ ಯೋಜನೆಯನ್ನು ಅನುಷ್ಠಾನಗೊಳಿಸಿರುವ ರಾಜ್ಯಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಐಆರ್‌ಇಡಿಎ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕುಮಾರ್ ದಾಸ್, ಎಂಎನ್‌ಆರ್‌ಇ ಜಂಟಿ ಕಾರ್ಯದರ್ಶಿ ದಿನೇಶ್ ಜಗದಾಳೆ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ರೋಶನ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.‌ರುದ್ರಪ್ಪಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುಸುಮ್‌ ಬಿ

ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಈ ಯೋಜನೆ ರೂಪಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ, ರೈತರಿಗೆ ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.

ನೋಂದಣಿ ಹೇಗೆ?

ರೈತರು ತಮ್ಮ ಆಧಾರ್, ಆರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಲ್ ಸೆಂಟರ್ ಸಂಖ್ಯೆ 080-22202100.

ಕುಸುಮ್‌ ಸಿ

ಕುಸುಮ್ ಸಿ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಪ್ರತ್ಯೇಕ ಸೋಲಾರ್ ಪಂಪ್‌ಗಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಯೋಜನೆ ಇದಾಗಿದೆ. ಸ್ವಂತ ಬಳಕೆಗಷ್ಟೇ ಅಲ್ಲದೇ, ಸೌರ ವಿದ್ಯುತ್ ಮಾರಾಟ ಮಾಡುವ ಮೂಲಕ ರೈತರು ಹೆಚ್ಚುವರಿ ಆದಾಯವನ್ನು ಪಡೆಯಬಹುದು.

ಐಪಿ ಸೆಟ್‌ಗಳಿಗೆ ಸೌರವಿದ್ಯುತ್‌ ಮೂಲದಿಂದ ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಹೆಚ್ಚುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಹಗಲು ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ.

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.