ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ರಂಜಾನ್ ಹಬ್ಬದ ಹಿನ್ನೆಲೆ ಉಪವಾಸ ಇದ್ದ ಮಕ್ಕಳು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವನೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಪಾನಿಪೂರಿ ಸೇವನೆ ಮಾಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.
ಇನ್ನೂ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾದ ಬಳಿಕ ಎಲ್ಲರನ್ನೂ ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಾಹಿತಿ ತಿಳಿದು ಹರಿಹರ ತಹಶೀಲ್ದಾರ್ ಗುರು ಬಸವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇನ್ನೂ ಇದಲ್ಲದೇ ಪಾನಿಪುರಿ ಅಂಗಡಿ ಬಿಟ್ಟು ಮಾರಾಟಗಾರ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ . ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.