ಕೋಲಾರ: ಜಿಲ್ಲೆಯಲ್ಲಿ ಮಾಲ್ಟ್ ಮಿಶ್ರಿತ ಹಾಲು ಕುಡಿದಂತ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಅಂತ ತಿಳಿದು ಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಗೊಂಡಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದು ಬೆಳಿಗ್ಗೆ ಮಾಲ್ಟ್ ಮಿಶ್ರಿತ ಹಾಲನ್ನು ಕುಡಿಯೋದಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಮಾಲ್ಟ್ ಮಿಶ್ರಿತ ಹಾಲು ಕುಡಿದಂತ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಅಂತ ತಿಳಿದು ಬಂದಿದೆ.
UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ