Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 9,195 `ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 12:42 PM

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM

ಕೆಲಸದಲ್ಲಿ ಅತಿಯಾಗಿ `AI’ ಮೇಲೆ ಅವಲಂಬಿತವಾಗುವುದು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ : ಅಧ್ಯಯನ

20/04/2026 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು
KARNATAKA

ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ಈ ಪೈಕಿ ನಾಲ್ಕು ಜಿಲ್ಲೆಗಳದ್ದೇ ಸಿಂಹಪಾಲು

By kannadanewsnow0907/01/2026 4:04 PM

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19,000 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಸುಮಾರು 13,000 ಪ್ರಕರಣಗಳು ಬೆಂ.ನಗರ, ಬೆಂ.ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದರೆ, ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6,000 ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ತಮ್ಮ ಕೆಲಸಕ್ಕೆ ವೇಗ ನೀಡಿದರೆ ಮಾತ್ರ ರಾಜ್ಯಮಟ್ಟದಲ್ಲಿ ಪ್ರಶ್ನಿಸಲು ಸಾಧ್ಯವಾಗುತ್ತದೆ” ಎಂದು ಅವರು ತಿಳಿಸಿದರು.

ಸಭೆಯಲ್ಲಿ ನಾಲ್ಕೂ ಜಿಲ್ಲೆಗಳ ಪ್ರಗತಿಯ ವಿವರಗಳನ್ನು ಪರಿಶೀಲಿಸಿದ ಸಚಿವರು, “ಕಳೆದ ಅಕ್ಟೋಬರ್ನಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ 15,364 ಪ್ರಕರಣಗಳು ಬಾಕಿ ಇದ್ದದ್ದು ಈಗ 13,610ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ. ಆದರೂ, ಮಿಸ್ಸಿಂಗ್ ರೆಕಾರ್ಡ್ಗಳು, ಆರ್ಸಿಸಿಎಂಎಸ್ನಲ್ಲಿ ವಿಲೇವಾರಿ ಆಗದ ಪ್ರಕರಣಗಳು ಹಾಗೂ ಅನರ್ಹ (ಅನ್ಫಿಟ್) ಪ್ರಕರಣಗಳು ಹಾಗೂ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನು ಜನವರಿ ಅಂತ್ಯದೊಳಗೆ ಮುಗಿಸಿದರೆ ಈ ಸಂಖ್ಯೆ ಮತ್ತಷ್ಟು ಸುಧಾರಿಸುತ್ತದೆ” ಎಂದು ಸಲಹೆ ನೀಡಿದರು.

“ಉಪ ವಿಭಾಗಾಧಿಕಾರಿಗಳಿಗೆ ತಮ್ಮ ಮುಂದಿರುವ ಸವಾಲುಗಳು ಹಾಗೂ ಪರಿಹಾರಗಳ ಬಗ್ಗೆ ಅರಿವಿದೆ. ಹೀಗಾಗಿ ಸುಲಭವಾಗಿ ಇತ್ಯರ್ಥಗೊಳಿಸಬಹುದಾದ ಪ್ರಕರಣಗಳನ್ನು ಮೊದಲು ಕೈಗೆತ್ತಿಕೊಳ್ಳಿ. ಮಾರ್ಚ್ ಅಂತ್ಯದೊಳಗೆ ಆರು ತಿಂಗಳು ಮೀರಿದ ಎಲ್ಲಾ ಕೇಸ್ಗಳನ್ನು ಕಡ್ಡಾಯವಾಗಿ ಮುಗಿಸಿ. ಫೆಬ್ರವರಿ ಮೊದಲ ವಾರದಲ್ಲಿ ಈ ನಾಲ್ಕು ಜಿಲ್ಲೆಗಳ ಮತ್ತೊಂದು ಸಭೆ ನಡೆಸಿ, ಅದರ ಆಧಾರದಲ್ಲಿ ರಾಜ್ಯಾದ್ಯಂತದ ಎಲ್ಲಾ ಎಸಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗೆ ದಿನಾಂಕ ನಿಗದಿಪಡಿಸಲಾಗುವುದು” ಎಂದು ತಿಳಿಸಿದರು.

ಈ ಜಿಲ್ಲೆಗಳಲ್ಲಿ ಸುಧಾರಣೆ ಕಾಣದಿದ್ದರೆ, ಇಡೀ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಸಭೆ ವ್ಯರ್ಥವಾಗುತ್ತದೆ ಎಂದು ಎಚ್ಚರಿಸಿದ ಅವರು, ಪ್ರತಿ ಶನಿವಾರ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಮೇಲ್ವಿಚಾರಣೆ ನಡೆಸುವಂತೆ ನೂತನ ಕಂದಾಯ ಆಯುಕ್ತರಾದ ಶ್ರೀಮತಿ ಮೀನಾ ನಾಗರಾಜ್ ಸಿ.ಎನ್. ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM1 Min Read

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ವೃದ್ಧ ಸಾವು, ಬಸ್ ಸಮೇತ ಚಾಲಕ ಪೊಲೀಸ್ ವಶಕ್ಕೆ!

20/04/2026 12:00 PM1 Min Read

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM1 Min Read
Recent News

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 9,195 `ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 12:42 PM

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM

ಕೆಲಸದಲ್ಲಿ ಅತಿಯಾಗಿ `AI’ ಮೇಲೆ ಅವಲಂಬಿತವಾಗುವುದು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ : ಅಧ್ಯಯನ

20/04/2026 12:18 PM

SHOCKING : ರೀಲ್ಸ್ ಹುಚ್ಚಿಗೆ ಮತ್ತೆ ಮೂವರು ಬಲಿ : ಟ್ರಕ್ ಗೆ ಡಿಕ್ಕಿ ಹೊಡೆದು ಒಂದೇ ಬೈಕ್ ನಲ್ಲಿದ್ದವರು ಸಾವು | WATCH VIDEO

20/04/2026 12:11 PM
State News
KARNATAKA

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

By kannadanewsnow0520/04/2026 12:20 PM KARNATAKA 1 Min Read

ಚಿಕ್ಕಮಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿ…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ವೃದ್ಧ ಸಾವು, ಬಸ್ ಸಮೇತ ಚಾಲಕ ಪೊಲೀಸ್ ವಶಕ್ಕೆ!

20/04/2026 12:00 PM

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.