ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಕೊಲೆ ಪ್ರಕರಣದ ತೀರ್ಪನ್ನು ದೆಹಲಿ ನ್ಯಾಯಾಲಯವು ಫೆಬ್ರವರಿ 12 ಕ್ಕೆ ಮುಂದೂಡಿದೆ.
ಶುಕ್ರವಾರ ಆದೇಶ ಹೊರಡಿಸಬೇಕಿದ್ದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ತೀರ್ಪನ್ನು ಮುಂದೂಡಿದರು.
1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.