ಜೈಪುರ: ರಾಜಸ್ಥಾನದ ಜೋಧ್ಪುರ ಬಳಿ ಗುರುವಾರ ಮದುವೆಯ ವೇಳೆ ಎರಡು ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ.
ಜೋಧಪುರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಔತಣವನ್ನು ಸಿದ್ಧಪಡಿಸುತ್ತಿದ್ದ ಗ್ಯಾಸ್ ಸಿಲಿಂಡರ್ಗಳಲ್ಲಿ ಸೋರಿಕೆಯಾಗಿ ಪ್ರಬಲ ಸ್ಫೋಟಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ರಭಸಕ್ಕೆ ಮದುವೆ ನಡೆಯುತ್ತಿದ್ದ ಮನೆಯ ಒಂದು ಭಾಗವೂ ಕುಸಿದು ಬಿದ್ದಿದೆ. 12 ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಸ್ಫೋಟದ ಪರಿಣಾಮವಾಗಿ ಮನೆಯ ಮೇಲ್ಛಾವಣಿ ಕುಸಿದಿದೆ. ಮಹಿಳೆಯರು ಮತ್ತು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮತ್ತು ಗ್ರಾಮಾಂತರ ಎಸ್ಪಿ ಅನಿಲ್ ಕಯಾಲ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. “ಇದು ತುಂಬಾ ಗಂಭೀರವಾದ ಅಪಘಾತ. ಗಾಯಾಳುಗಳನ್ನು ಎಂಜಿಹೆಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ” ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಸಂಜೆ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಆಪ್ ಮೂಲಕ ಹಣ ವರ್ಗಾವಣೆ ಮಾಡೋರಿಗೆ ಸಿಹಿ ಸುದ್ದಿ: ಪ್ರತಿದಿನದ ವಹಿವಾಟು ಮಿತಿ ಹೆಚ್ಚಳ
BIGG NEWS : ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ‘ಥಾವರ್ ಚಂದ್ ಗೆಹ್ಲೋಟ್’ ಆಗಮನ : ಬಿಗಿ ಪೊಲೀಸ್ ಬಂದೋಬಸ್ತ್
ಆಪ್ ಮೂಲಕ ಹಣ ವರ್ಗಾವಣೆ ಮಾಡೋರಿಗೆ ಸಿಹಿ ಸುದ್ದಿ: ಪ್ರತಿದಿನದ ವಹಿವಾಟು ಮಿತಿ ಹೆಚ್ಚಳ