ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದ ದಾಮೋಹ್ನಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿದ್ದು, 45 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆರೋಗ್ಯ ಇಲಾಖೆಯ ತಂಡ ಬರುವ ಮುನ್ನವೇ ಗ್ರಾಮದ ಇಬ್ಬರು ನಿವಾಸಿಗಳು ಮೃತಪಟ್ಟಿದ್ದರು. ನಂತ್ರ, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಹತ್ತು ರೋಗಿಗಳನ್ನು ದಾಮೋಹ್ನ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೂವತ್ತೈದು ಮಂದಿಯನ್ನು ಸಮೀಪದ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಬಾವಿಯ ಕಲುಷಿತ ನೀರು ಸೇವನೆಯಿಂದ ತೀವ್ರ ಗ್ಯಾಸ್ಟ್ರೋಎಂಟರೈಟಿಸ್ ಮತ್ತು ಸಂಬಂಧಿತ ಸಮಸ್ಯೆಗಳು ಉಂಟಾಗಿರಬಹುದು. ಇದೀಗ ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
BREAKING NEWS : ರಾಜಸ್ಥಾನದಲ್ಲಿ ‘MiG-21 ವಿಮಾನ’ ಪತನ ; ಇಬ್ಬರು ಪೈಲಟ್ʼಗಳು ಸಾವು |MIG Plane Crash