ಔರಂಗಾಬಾದ್: ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ 17 ವರ್ಷದ ಇಬ್ಬರು ಹುಡುಗಿಯರು ಬಾಯ್ಫ್ರೆಂಡ್ ವಿಷಯಕ್ಕೆ ಜಗಳವಾಡಿ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ.
ಬುಧವಾರ ಬೆಳಗ್ಗೆ ಪೈಠಾಣ್ನ ಜನನಿಬಿಡ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕಿಯರಲ್ಲಿ ಒಬ್ಬಳು ಹುಡುಗನೊಂದಿಗೆ ಬಸ್ ನಿಲ್ದಾಣಕ್ಕೆ ಬಂದಳು. ಅದನ್ನು ಕಂಡ ಇನ್ನೊಬ್ಬ ಹುಡುಗಿ ಕೂಡ ಅವರಿದ್ದ ಸ್ಥಳಕ್ಕೆ ಬಂದಿದ್ದಾಳೆ. ಈ ನಡುವೆ ಇವರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. ಆದ್ರೆ, ಈ ವೇಳೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಬಾಲಕಿಯರನ್ನು ಅಂತಿಮವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS : ರಾಜ್ಯದಲ್ಲಿ ಆಗಸ್ಟ್ 29 ರಿಂದ `ಗ್ರಾಮೀಣ ಕ್ರೀಡಾಕೂಟ’ : ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ