ಹಾಸನ : ದಸರಾ ರಜೆ ಹಿನ್ನೆಲೆ ಈಜಲು ಕೆರೆಗೆ ಇಳಿದಿದ್ದ ಮೂವರು ಬಾಲಕರ ಪೈಕಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಆಕಾಶ್ (13) , ಲೋಕೇಶ್ (13) ಎಂದು ಗುರುತಿಸಲಾಗಿದೆ. ದಸರಾ ಹಬ್ಬದ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಈಜಲು ಬಾರದೇ ಇದ್ದರು ಮೂವರು ಬಾಲಕರು ಕೆರೆಗೆ ಇಳಿದಿದ್ದಾರೆ. ಈ ವೇಳೆ ಈಜಕು ಬಾರದೇ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಮೂವರ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಶ್ರವಣಬೆಳಗೊಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
‘ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ’ : ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ ಭವಿಷ್ಯ |H.D Devegowda