ಆಂಧ್ರಪ್ರದೇಶ : ಇಂದು ಮುಂಜಾನೆ ಆಂಧ್ರಪ್ರದೇಶದ ಚಿತ್ತೂರು ಪಟ್ಟಣದ ಹೊರವಲಯದಲ್ಲಿ ಕಾರು ನಿಯಂತ್ರಣ ತಪ್ಪಿ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಇಬ್ಬರು ಪೊಲೀಸರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ವೇಶ್ಯಾವಾಟಿಕೆ ಶಂಕೆ: ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ, 73 ಮಂದಿಯ ಬಂಧನ
ಚಿತ್ತೂರು ಜಿಲ್ಲೆಯ ಪುತಲಪಟ್ಟು ಮಂಡಲಕ್ಕೆ ಕಾರು ತೆರಳುತತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಅಂಡರ್ ಪಾಸ್ ಸೇತುವೆ ಬಳಿ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯ ಇನ್ನೊಂದು ಬದಿಯಲ್ಲಿ ಕಾರು ಪಲ್ಟಿಯಾಗಿದೆ ಎನ್ನಲಾಗುತ್ತಿದೆ.
ಪೊಲೀಸರ ಪ್ರಕಾರ, ಕಾರಿನಲ್ಲಿ ಇಬ್ಬರು ಸಬ್ಇನ್ಸ್ಪೆಕ್ಟರ್ಗಳು ಮತ್ತು ಇಬ್ಬರು ಕಾನ್ಸ್ಟೆಬಲ್ಗಳಿದ್ದರು. ಇವರಲ್ಲಿ ಇಬ್ಬರು ಕರ್ನಾಟಕದ ಕೋಲಾರ ಜಿಲ್ಲೆಯ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರೆಲ್ಲ ಮುಳಬಾಗಲಿನಿಂದ ತಿರುಪತಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತ ಪೊಲೀಸರನ್ನು ಎಸ್ಐ ಅವಿನಾಶ್ ಮತ್ತು ಕಾನ್ಸ್ಟೆಬಲ್ ಅನಿಲ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಮೂರನೇ ವ್ಯಕ್ತಿ ಕಾರು ಚಾಲಕನಾಗಿದ್ದಾನೆ. ಉಳಿದಂತೆ ಗಾಯಾಳುಗಳನ್ನು ವೆಲ್ಲೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Breaking news: ಕ್ಯಾಲಿಫೋರ್ನಿಯಾದ ಯೊಸೆಮೈಟ್ ಬಳಿ ಭೀಕರ ಕಾಡ್ಗಿಚ್ಚು… ತುರ್ತು ಪರಿಸ್ಥಿತಿ ಘೋಷಣೆ