BREAKING NEWS: ಪಿಕ್ನಿಕ್‌ನಿಂದ ವಾಪಸ್ಸಾಗುವಾಗ ಮುಂಬೈ ಬಳಿ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

ಮುಂಬೈ: ಇಂದು ಮುಂಜಾನೆ ಮುಂಬೈ ಬಳಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ ಕೋಚಿಂಗ್ ತರಗತಿಯ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ 10 ನೇ ತರಗತಿಯ 48 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಹೊತ್ತ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿದ್ದ ವೇಳೆ ಹಳೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಸ್‌ ಪಲ್ಟಿಯಾಗಿದೆ. … Continue reading BREAKING NEWS: ಪಿಕ್ನಿಕ್‌ನಿಂದ ವಾಪಸ್ಸಾಗುವಾಗ ಮುಂಬೈ ಬಳಿ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ