ಚಿಕಾಗೋ : ಅಮೆರಿಕದ ಚಿಕಾಗೋದ ಪಶ್ಚಿಮ ಭಾಗದಲ್ಲಿರುವ ಶಾಲೆಯ ಬಳಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆನಿಟೊ ಜುರೆಜ್ ಹೈಸ್ಕೂಲ್ ಬಳಿ 16 ವರ್ಷ ವರ್ಷದ ನಾಲ್ವರು ಯುವಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಚಿಕಾಗೋ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ಕೆರದುಕೊಂಡು ಹೋಗಿದ್ದರು. ಆದರೆ ದಾರಿ ಮಧ್ಯೆ ಓರ್ವ ಬಾಲಕ ಸಾವನ್ನಪ್ಪಿದ್ದು, ಇನ್ನೊಬ್ಬ ಹುಡುಗನ ಸ್ಥಿತಿ ಗಂಭೀರವಾಗಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.