ತಮಿಳುನಾಡು : ಕಲ್ಲಕುರುಚಿ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರು ಶಿಕ್ಷಕರು ಮತ್ತು ಅಧಿಕಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕೊಡಗಿನ ಹಿಂದೂ ಯುವಕನ* *ಬಂಧನ*
ತಮಿಳುನಾಡಿನ ಕಲ್ಲಕುರಿಚಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕರಿಂದ ಚಿತ್ರಹಿಂಸೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೊದಲ ಶವಪರೀಕ್ಷೆಯಲ್ಲಿ ಉಲ್ಲೇಖಿಸಿದಂತೆ ಸಾವಿಗೆ ಅನೇಕ ಗಾಯಗಳು ಮತ್ತು ರಕ್ತಸ್ರಾವ ಕಾರಣವಾಗಿತ್ತು.
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಜುಲೈ 13 ರಂದು 12 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಶಿಕ್ಷಕಿಯೊಬ್ಬಳು ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸೋಮವಾರ, ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಮತ್ತು ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಈ ಹಿಂದೆ, ಪ್ರಾಂಶುಪಾಲರು ಮತ್ತು ಕಾರ್ಯದರ್ಶಿ ಸೇರಿದಂತೆ ಶಾಲೆಯ ಮೂವರು ಆಡಳಿತ ಮಂಡಳಿ ಅಧಿಕಾರಿಗಳನ್ನು ಬಂಧಿಸಲಾಗಿತ್ತು.
ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕೊಡಗಿನ ಹಿಂದೂ ಯುವಕನ* *ಬಂಧನ*
ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದವು
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 12 ನೇ ತರಗತಿ ವಿದ್ಯಾರ್ಥಿಯ ಆತ್ಮಹತ್ಯೆಯು ಅಶಾಂತಿಯನ್ನು ಸೃಷ್ಟಿಸಿತು. ಪ್ರತಿಭಟನಾಕಾರರು ಶಾಲಾ ಬಸ್ಸುಗಳು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಭಾನುವಾರ ಹಲವಾರು ಪೊಲೀಸ್ ಅಧಿಕಾರಿಗಳಿಗೂ ಗಾಯಗಳಾಗಿದೆ
ವರದಿಗಳ ಪ್ರಕಾರ, 12 ನೇ ತರಗತಿಯ ವಿದ್ಯಾರ್ಥಿಯ ಸಾವಿನ ಬಗ್ಗೆ ಪ್ರತಿಭಟಿಸಲು ಮತ್ತು ನ್ಯಾಯಕ್ಕಾಗಿ 500 ಕ್ಕೂ ಹೆಚ್ಚು ಜನರು ಶಾಲೆಯ ಮುಂದೆ ಜಮಾಯಿಸಿದ್ದರು. ಆದಾಗ್ಯೂ, ಪ್ರತಿಭಟನಾಕಾರರು ಕಲ್ಲು ತೂರಾಟ ಮತ್ತು ಶಾಲಾ ಬಸ್ ಗಳಿಗೆ ಬೆಂಕಿ ಹಚ್ಚಲು ಪ್ರಾರಂಭಿಸಿದಾಗ ಅದು ಹಿಂಸಾಚಾರಕ್ಕೆ ತಿರುಗಿತು. ಅವರು ಶಾಲೆಯ ಆಸ್ತಿಪಾಸ್ತಿ ಕೂಡಾ ನಷ್ಟವಾಗಿದೆ
#WATCH Tamil Nadu | Violence broke out in Kallakurichi with protesters entering a school, setting buses ablaze, vandalizing school property as they sought justice over the death of a Class 12 girl pic.twitter.com/gntDjuC2Zx
— ANI (@ANI) July 17, 2022