ಅವಂತಿಪೋರಾ (ಜಮ್ಮು ಮತ್ತು ಕಾಶ್ಮೀರ) : ಅವಂತಿಪೋರಾದಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹೊಡೆದುರುಳಿಸಲಾಗಿದೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆವಂತಿಪೋರಾದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿಯಾಗಿ ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಉಗ್ರರು ಜಂಟಿ ಶೋಧ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಿದರು. ಇದು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿತು.
ನಂತ್ರ ಕೊಲ್ಲಲ್ಪಟ್ಟ ಭಯೋತ್ಪಾದಕರ ಶವಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.