Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಉತ್ತಂಗರೈ : “ತಮಿಳುನಾಡಿನಲ್ಲಿ ಮಹಿಳೆಯರಿಗೆ ಪ್ರಸ್ತುತ 1 ಸಾವಿರ ಹಣ ನೀಡುತ್ತಿದ್ದು, ಈ ಚುನಾವಣೆ ಬಳಿಕ ಕರ್ನಾಟಕ ಮಾದರಿಯಂತೆ 2 ಸಾವಿರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ತಮಿಳುನಾಡಿನ ಉತ್ತಂಗರೈ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಪ್ಪುಸ್ವಾಮಿ ಅವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಚುನಾವಣೆ ಪ್ರಚಾರ ಭಾಷಣ ಮಾಡಿದರು.

“1.31 ಕೋಟಿ ಕುಟುಂಬದ ಮಹಿಳೆಯರಿಗೆ ಇದರಿಂದ ಪ್ರಯೋಜನವಾಗಲಿದೆ. ವಿದ್ಯುತ್ ಮೀಟರ್ ಇಲ್ಲದೆ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು. ಕುಟುಂಬದ ಅಗತ್ಯ ವಸ್ತುಗಳ ಖರೀದಿಗೆ 8 ಸಾವಿರ ನೀಡುವ ಭರವಸೆ ನೀಡಲಾಗಿದೆ. ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಹಣಗಳ ಹೆಚ್ಚಳ ಮಾಡಲಾಗುವುದು” ಎಂದರು.

ದಕ್ಷಿಣ ಭಾರತ ವಿಭಜಿಸುವ ಬಿಜೆಪಿ

“ಸ್ಟಾಲಿನ್ ಅವರು ಮತ್ತೆ ತಮಿಳುನಾಡಿನ‌ ಮುಖ್ಯಮಂತ್ರಿಯಾಗಲಿದ್ದಾರೆ. ಅಣ್ಣಾ ಡಿಎಂಕೆಗೆ ಯಾವುದೇ ಅವಕಾಶವಿಲ್ಲ. ತನ್ನ ಅಸ್ತಿತ್ವ ಕಳೆದುಕೊಂಡಿರುವ ಅದು ಬಿಜೆಪಿ ಸೇರಿ ಛಿದ್ರವಾಗಿ ಹೋಗಿದೆ. ಇವರುಗಳು ದಕ್ಷಿಣ ಭಾರತವನ್ನ ಭಾಗ ಮಾಡಬೇಕು ಎಂದು ಹೊರಟಿದ್ದಾರೆ. ಅಣ್ಣಾ ಡಿಎಂಕೆಯವರು ಬಿಜೆಪಿ ಜೊತೆ ಸೇರಿ ತಮಿಳುನಾಡಿನ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ” ಎಂದರು.

“ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಗಳಾಗಿದ್ದ ಕಾಮರಾಜ್ ಅವರು ಅಂದಿನ ಕಾಲದಲ್ಲಿಯೇ ಎಲ್ಲರಿಗೂ ಉಚಿತ ಶಿಕ್ಷಣ ನೀಡಬೇಕು ಎಂದು ಆಲೋಚಿಸಿದ್ದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದ ಬಗ್ಗೆ ಚಿಂತನೆ ಮಾಡಿದೆ. ಕಾರ್ಮಿಕರು, ರೈತರು, ವರ್ತಕರು, ವಿದ್ಯಾರ್ಥಿಗಳು ಮಕ್ಕಳಿಂದ ವಯಸ್ಸಾದವರವರೆಗೆ ಕಾರ್ಯಕ್ರಮ ಕೊಟ್ಟಿದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ” ಎಂದರು.

“ಆಹಾರ ಭದ್ರತಾ ಕಾಯ್ದೆ, ನರೇಗಾ ಸೇರಿದಂತೆ ಅನೇಕ ಜನಪರ ಯೋಜನೆ ನೀಡಿದ್ದು ಕಾಂಗ್ರೆಸ್ ಪಕ್ಷ. ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ನೀಡಿದ್ದೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ತಿಂಗಳಿಗೆ 2 ಸಾವಿರ, 10 ಕೆಜಿ ಅಕ್ಕಿ ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ” ಎಂದರು.

“ಕಾಂಗ್ರೆಸ್ ಅಭ್ಯರ್ಥಿ ಕುಪ್ಪುಸ್ವಾಮಿ ಅವರು ಪಕ್ಷದ ಯೂನಿಯನ್ ನಾಯಕರು. ಇದೇ ಭಾಗದಲ್ಲಿ ಸಾಕಷ್ಟು ಪ್ರಭಾವ ಹೊಂದಿರುವವರು. ಹಸ್ತ ಇಲ್ಲ ಅಂದರೆ ನಾವು ನೀವು ಯಾರೂ ಬದುಕೋಕೆ ಆಗಲ್ಲ. ಎಲ್ಲರೂ ಹಸ್ತ ಬಳಸಿಯೇ ಮತ ಹಾಕಬೇಕು. ಇದೇ ಹಸ್ತ ದೇಶಕ್ಕೆ ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜ ನೀಡಿದೆ. ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಇದೇ ಕಾಂಗ್ರೆಸ್ ಪಕ್ಷ” ಎಂದರು‌.

“ತಮಿಳು ಸಂಸ್ಕೃತಿ, ತಮಿಳು ಭಾಷೆ, ಅಸ್ತಿತ್ವ, ಗೌರವ ಉಳಿಯಬೇಕು ಎಂದರೆ ಎಲ್ಲರೂ ಡಿಎಂಕೆ, ಕಾಂಗ್ರೆಸ್, ಕಮ್ಯುನಿಸ್ಟ್ ಹಾಗೂ ಇತರರನ್ನು ಒಳಗೊಂಡ ಮೈತ್ರಿಕೂಟಕ್ಕೆ ಮತ ನೀಡಬೇಕು. ಸ್ಟಾಲಿನ್‌ ಅವರ ಮುಂದಾಳತ್ವದಲ್ಲಿ 20 ಪಕ್ಷಗಳ ಮೈತ್ರಿ ಒಂದುಗೂಡಿ ಕೆಲಸ ಮಾಡುತ್ತಿವೆ. ನಾವು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ” ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.