ಪಶ್ಚಿಮ ಬಂಗಾಳ : ತೃಣಮೂಲ ಕಾಂಗ್ರೆಸ್ ಪಂಚಾಯಿತಿ ನಾಯಕರೊಬ್ಬರ ನಿರ್ಮಾಣ ಹಂತದ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಟ್ಟಡ ಕಾರ್ಮಿಕರು ಗಾಯಗೊಂಡಿರುವ ಘಟನೆ ಬಂಗಾಳದ ದೇಗಂಗಾದಲ್ಲಿ ನಡೆದಿದೆ.
ಗಾಯಾಳುಗಳನ್ನು ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿರ್ಮಾಣ ಕಟ್ಟಡದ ಸ್ಥಳದಿಂದ ಪೊಲೀಸರು ಮೂರು ಹೆಚ್ಚುವರಿ ಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಮಡಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಎಂದು ತಿಳಿದು ಬಂದಿದೆ.
ಕಳೆದ ಮಂಗಳವಾರ, ಉತ್ತರ 24 ಪರಗಣದ ಟಿಎಂಸಿ ಪಂಚಾಯತ್ ನಾಯಕ ಸುಕುರ್ ಅಲಿಯನ್ನು ಪೊಲೀಸರು ಶಸ್ತ್ರಾಸ್ತ್ರಗಳೊಂದಿಗೆ ಹಿಡಿದಿದ್ದರು.
ಮುಂದಿನ ವರ್ಷ ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ಬಂಗಾಳದ ಕೆಲವು ಭಾಗಗಳಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿರುವುದು ಆತಂಕ ಉಂಟು ಮಾಡಿದೆ.
BREAKING NEWS : ಮಂಗಳೂರಿನಲ್ಲಿ ಭೀಕರ ಅಪಘಾತ ; ಬೈಕ್ಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು