ಆಂಧ್ರಪ್ರದೇಶ: ಇಲ್ಲಿ ತಡರಾತ್ರಿ ಬಸ್ ಬೈಕಿಗೆ ಡಿಕ್ಕಿಯಾಗಿ ಸಂಭವಿಸಿದಂತ ಅಗ್ನಿ ದುರಂತದಲ್ಲಿ 20 ಮಂದಿ ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಬಸ್ ಅಗ್ನಿ ದುರಂತದ ಬಸ್ಸು ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದರು.
ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಲವರ ಶವಗಳು ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಹೀಗಾಗಿ ಡಿಎನ್ಎ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದರು.
ಮೊದಲು ರಾಜ್ಯದ ಜ್ವಲಂತ ಸಮಸ್ಯೆ ಪರಿಹರಿಸಿ, ಆಮೇಲೆ ಸಿಎಂ ಉತ್ತರಾಧಿಕಾರಿ ವಿಷಯ ಚರ್ಚಿಸಿ – ಎನ್.ರವಿಕುಮಾರ್








