ಚಿತ್ರದುರ್ಗ: ದಾವಣಗೆರೆ ವಿರಕ್ತ ಮಠದಲ್ಲಿ 20ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಬಸವಪ್ರಭುಶ್ರೀ ವಿರುದ್ಧ ಮಾಜಿ ಸಚಿವ ಹೆಚ್.ಏಕಾಂತಯ್ಯ ಗಂಭೀರ ಆರೋಪ ಮಾಡಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಹೆಚ್.ಏಕಾಂತಯ್ಯ ದಾವಣಗೆರೆ ವಿರಕ್ತ ಮಠದಲ್ಲಿ 20ಲಕ್ಷ ರೂ. ಅವ್ಯವಹಾರ ನಡೆದಿದೆ, ಈ ಕುರಿತು ತನಿಖೆ ನಡೆಸಬೇಕು, ಭಾರೀ ಹಣದ ಅವ್ಯವಹಾರ ಆರೋಪಗಳಿದೆ , ತನಿಖೆ ನಡೆಸಿದರೆ ಅವ್ಯವಹಾರ ಬಯಲಾಗುತ್ತದೆ ಎಂದು ಹೇಳಿದ್ದಾರೆ.
ಮುರುಘಾ ಶ್ರೀ ನ್ಯಾಯಾಂಗ ಬಂಧನ ವಿಸ್ತರಣೆ
ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿದ್ದಂತ ಪೋಸ್ಕೋ ಪ್ರಕರಣದಲ್ಲಿ, ಮತ್ತೆ ನ್ಯಾಯಾಲಯವು, ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಪೋಸ್ಕೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವಂತ ಎ.1 ಆರೋಪಿ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಶಿವಶರಣರು, ಎ2 ಆರೋಪಿ ವಾರ್ಡನ್ ರಶ್ಮಿ ಹಾಗೂ ಎ4 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು.
ಈ ಹಿನ್ನಲೆಯಲ್ಲಿ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು, ಮುರುಘಾ ಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಮತ್ತೊಂದೆಡೆ ರಾಜ್ಯ ಸರ್ಕಾರದಿಂದ ಮುರುಘಾ ಮಠದ ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸಂಜೆ 7:30 ಕ್ಕೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ