ಬೆಂಗಳೂರು : ರಾಜ್ಯದಲ್ಲಿ 200ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಶುರುವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ಆರೋಗ್ಯ ಸಿಟಿ ಸಮ್ಮಿಟ್ನಲ್ಲಿ ಪಾಲ್ಗೊಂಡು ಮಾತನಾಡಿದ ಸುಧಾಕರ್, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಮುಂದಿನ 18 ತಿಂಗಳಲ್ಲಿ ಶೇ.100ರಷ್ಟು ಜನರಿಗೆ ಮಧುಮೇಹ, ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮಾಡಿಸಲು ಆರೋಗ್ಯ ಇಲಾಖೆ ಗುರಿ ಹೊಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
. 200 ಕ್ಕೂ ಅಧಿಕ ‘ನಮ್ಮ ಕ್ಲಿನಿಕ್’ ಕಾರ್ಯಾಚರಣೆಗೆ ಸಿದ್ಧವಾಗಿವೆ. ಸದ್ಯಕ್ಕೆ 100 ಹಾಗೂ ಮುಂದಿನ ವಾರದ ನಂತರ ಬೆಂಗಳೂರಿನಲ್ಲಿ ಹೊಸ ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಾಗುವುದು ಎಂದು ಸುಧಾಕರ್ ಹೇಳಿದರು. ರಾಜ್ಯದ ಅನೇಕರಿಗೆ ಮಾನಸಿಕ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಕ್ಯಾನ್ಸರ್ ವಿಚಾರದಲ್ಲೂ ಹೀಗೆಯೇ ಆಗುತ್ತಿದೆ. ಕಿದ್ವಾಯಿ ಸಂಸ್ಥೆ ಮೂಲಕ ಕ್ಯಾನ್ಸರ್ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ,ಮಧುಮೇಹಿಗಳಲ್ಲಿ ಶೇ. 75ರಷ್ಟು ಜನರು ಚಿಕಿತ್ಸೆ ಪಡೆಯುತ್ತಿಲ್ಲ. ಆದ್ದರಿಂದ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿಯೊಬ್ಬರಲ್ಲೂ ಮಧುಮೇಹ ಪತ್ತೆ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು.
ಕಂಬಳ, ಯಕ್ಷಗಾನ, ಜಾತ್ರೆಗೆ ಹಿಂದುಗಳ ಸೋಗಿನಲ್ಲಿ ಉಗ್ರರು ಬಂದಾರು ಹುಷಾರು : ಪೇಜಾವರ ಶ್ರೀ ಎಚ್ಚರಿಕೆ
BREAKING NEWS: ಶ್ರದ್ಧಾ ವಾಕರ್ ಕೊಲೆ ಆರೋಪಿ ಅಫ್ತಾಬ್ ಪೂನವಾಲಾ ಪ್ರಯಾಣಿಸುತ್ತಿದ್ದ ಪೊಲೀಸ್ ವ್ಯಾನ್ ದಾಳಿ