ಬೆಂಗಳೂರು: ಮಾರ್ಚ್.28ರ ನಾಳೆಯಿಂದ 30ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್.31ರಂದು ವಿವಿಧೆಡೆಯಿಂದ ಬೆಂಗಳೂರಿಗೆ 2000 ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.
ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.
ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ksrtc.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ.10 ರಿಯಾಯಿತಿ ದೊರೆಯಲಿದೆ.
ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.
ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ,… pic.twitter.com/VTdVQlukYK
— DIPR Karnataka (@KarnatakaVarthe) March 27, 2025
BIG NEWS: ‘ಹೆಲ್ಮೆಟ್’ ಧರಿಸದೇ ಬೈಕ್ ಚಲಾಯಿಸಿದ ‘ರಜತ್ ಪತ್ನಿ’: ಇವರಿಗೆ ‘ರೂಲ್ಸ್ ಅಪ್ಲೈ’ ಆಗಲ್ವ ಎಂದ ನೆಟ್ಟಿಗರು
BREAKING NEWS: ಏಪ್ರಿಲ್.2ರಂದು 384 KAS ಹುದ್ದೆಗಳ ನೇಮಕಾತಿಗೆ ‘ಮುಖ್ಯ ಪರೀಕ್ಷೆ’: KPSC ಮಾಹಿತಿ | KAS Main Exam