ಬೆಂಗಳೂರು : ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ. ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ.
ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ ನಿರ್ಧಾರಕ್ಕೆ ನಾವು ಬಂದಿದ್ದೇವೆ.ಬಸವಾದಿ ಶರಣರ ಕಾಯಕವೇ ಕೈಲಾಸವೆಂಬ ಮಾತಿಗೆ ಬದ್ಧರಾಗಿ ಬಿಸಿಲು – ಮಳೆ, ಹಗಲು – ರಾತ್ರಿಯೆನ್ನದೆ ಸಮಾಜವನ್ನು ಸ್ವಚ್ಚವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಲ್ಯಾಣ ನಮ್ಮ ಕರ್ತವ್ಯ.
2017ರಲ್ಲಿಯೂ 10,000 ಪೌರಕಾರ್ಮಿಕರ ಖಾಯಂಮಾತಿ, ವೇತನವನ್ನು ₹7,000 ದಿಂದ ₹17,000 ಸಾವಿರಕ್ಕೆ ಹೆಚ್ಚಳ ಮಾಡಿದ್ದು ನಾವೇ, ಎಲ್ಲ ಕಾಲಕ್ಕೂ ಶ್ರಮಿಕ ಜನರ ನಿಜವಾದ ಹಿತಚಿಂತಕರು ನಾವೆ.ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ ಎಂದು ತಿಳಿಸಿದ್ದಾರೆ.
ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ.
ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ. #ಪೌರಕಾರ್ಮಿಕರು pic.twitter.com/3gyJxcaLVK— Siddaramaiah (@siddaramaiah) April 7, 2025