ಬೆಂಗಳೂರು : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS : `PSI’ ನೇಮಕಾತಿಗೆ ಶಾಸಕ ದಡೇಸುಗೂರು ಲಂಚ ಪಡೆದ ಆರೋಪ : ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸುವುದು ಬೇಡ. ನಮ್ಮದು ಚಿಕ್ಕ ಪಕ್ಷ, ರಾಜ್ಯದಲ್ಲಿ ಕೆಲವೇ ಶಾಸಕರಿದ್ದೇವೆ. 2023 ರ ಚುನಾವಣೆ ಜೆಡಿಎಸ್ ಪಕ್ಷಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಹೆಚ್ಚು ಕಡಿಮೆ ಏನಾದರೂ ಆದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ನಿಖಿಲ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವುದು ಬೇಡ ಎಂದಿದ್ದಾರೆ.
BIGG NEWS: ರಾಯಚೂರಿನಲ್ಲಿ ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಫೋಟೋ ಮಾಯ
ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ ಕಾಲ ನಮ್ಮದೇ ಪಾರುಪತ್ಯ ಇರುತ್ತದೆ ಎಂದು ಹೇಳಿದ್ದರು.
BIGG NEWS: ರಾಯಚೂರಿನಲ್ಲಿ ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಫೋಟೋ ಮಾಯ