ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದಂತ ಕಲ್ಲು ತೂರಾಟ ಪ್ರಕರಣದಲ್ಲಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇಂತಹ ಕೃತ್ಯವೆಸಗುವ ಯಾರೇ ಆದರೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿದೆ. ಮಸೀದಿ ಬಳಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಈ ವೇಳೆಯಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದರು.
ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ನಾವು ಯಾರೇ ತಪ್ಪು ಮಾಡಿದ್ರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಹಿಂದೂ, ಮುಸ್ಲೀಂ ಎನ್ನುವ ಬೇಧ ಭಾವವಿಲ್ಲ. ಕಾನೂನು ಕೈಗೆತ್ತಿಕೊಂಡ ಎಲ್ಲರ ವಿರುದ್ಧವೂ ಕಾನೂನು ಕ್ರಮ ಆಗಲಿದೆ ಎಂದರು ಹೇಳಿದರು.
ಮದ್ದೂರಿನ ಗಲಾಟೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸ್ಥಳಕ್ಕೆ ತೆರಳುತ್ತಿದ್ದಾರೆ. ಅವರ ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ