ಬೆಂಗಳೂರು: ನಿನ್ನೆ 16 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದ್ದಂತ ಸೋಂಕಿತರ ಸಂಖ್ಯೆ, ಇಂದು 22ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಕ್ರೀಯ ಪ್ರಕರಣಗಳ ಸಂಖ್ಯೆ 1,221ಕ್ಕೆ ತಲುಪಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಯಲ್ಲಿ 19 ಮಂದಿಗೆ ಹೊಸದಾಗಿ ಕೋವಿಡ್ ದೃಢಪಟ್ಟಿದೆ. ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿದಂತೆ 22 ಮಂದಿಗೆ ಸೋಂಕು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ತಿಳಿಸಿದೆ.
ಇಂದು 22 ಮಂದಿಗೆ ಸೋಂಕು ದೃಢಪಟ್ಟ ಕಾರಣ, ಈವರೆಗೆ ಸೋಂಕಿತರ ಸಂಖ್ಯೆ 40,71,798ಕ್ಕೆ ಏರಿಕೆಯಾಗಿದೆ. ಇವರಲ್ಲಿ ಕಳೆದ 24 ಗಂಟೆಯಲ್ಲಿ 42 ಮಂದಿ ಸೇರಿದಂತೆ 40,30,270 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಈಗ 1,221 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.