Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

12/03/2026 8:54 AM

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಕ್ಕೆ ಗೆಲುವು? ಅಧ್ಯಕ್ಷ ಟ್ರಂಪ್ ಸಂಭ್ರಮದ ನಡುವೆಯೇ ಹೆಚ್ಚಾದ ಕ್ಷಿಪಣಿ ದಾಳಿ!

12/03/2026 8:46 AM

World Kidney Day 2026 : `ಕಿಡ್ನಿ’ ಆರೋಗ್ಯವಾಗಿರಲು ಈ 7 ಆಹಾರಗಳನ್ನು ಪ್ರತಿದಿನ ಸೇವಿಸಿ !

12/03/2026 8:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಸಚಿವ ಹೆಚ್.ಕೆ ಪಾಟೀಲ್
KARNATAKA

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಸಚಿವ ಹೆಚ್.ಕೆ ಪಾಟೀಲ್

By kannadanewsnow0909/12/2025 3:02 PM

ಬೆಳಗಾವಿ ಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.

2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ರೂ.5 ಲಕ್ಷದಂತೆ ಒಟ್ಟು ರೂ.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ ಅನುದಾನ ಬಿಡುಗಡೆ ಕ್ರಮ ಕೈಗೊಳ್ಳುವ ಆಶ್ವಾಸನೆಯನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಸಚಿವರ ನಿರ್ಧಾರವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡದ ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಲೈಟ್ ಹೌಸ್ ಬೀಚ್ ಅಭಿವೃದ್ಧಿ

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್ ಹೌಸ್ ಬೀಚ್ ಅಭಿವೃದ್ಧಿಗೆ ಸರ್ಕಾರ ಮಂಜೂರಾತಿ ನೀಡಿದೆ. ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಸರ್ಕಾರ ಇಂಬು ನೀಡುತ್ತಿದೆ. ಕಾಪು ವಿಧಾನಸಭಾ ಕ್ಷೇತ್ರ ಪಡುಬಿದ್ರಿ ನಡಿಘಟ್ಟ ಬೀಚ್ ರಸ್ತೆಯ ಎಂಡ್ ಪಾಯಿಂಟ್‌ನಲ್ಲಿ ಸಂಪರ್ಕ ಸೇತುವೆ ಹಾಗೂ ಕೂಡು ರಸ್ತೆ ನಿಮಾರ್ಣ ಕಾಮಗಾರಿಯನ್ನು ರೂ.75 ಲಕ್ಷದಲ್ಲಿ ಪೂರ್ಣಗೊಳಿಸಲಾಗಿದೆ. 2025-26ನೇ ಸಾಲಿಗೆ ಆಯವ್ಯಯದಲ್ಲಿ ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ.86 ಕೋಟಿಗಳನ್ನು ಒದಗಿಸಲಾಗಿದೆ. ಇದರಲ್ಲಿ ಪ್ರವಾಸಿ ತಾಣಗಳ ಆದ್ಯತೆಗೆ ಅನುಗುಣವಾಗಿ ಪರಿಶೀಲಿಸಿ ರೂ.14 ಕೋಟಿ ವೆಚ್ಚದ ನೂತನ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಲ್ಲಿ ಕಾಪು ತಾಲ್ಲೂಕಿನ ಕಾಪು ಬೀಚ್, ಲೈಟ್ ಹೌಸ್, ಪಡುಬಿದ್ರೆ ಎಂಡ್ ಪಾಯಿಂಟ್ ಬ್ಲೂ ಫ್ಲಾಗ್ ಬೀಚ್, ಕಾಪು ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷಿö್ಮÃ ದೇವಸ್ಥಾನ, ಉಡುಪಿ ಕುಂಜರುಗಿರಿಯ ಶ್ರೀ ದುರ್ಗಾ ದೇವಿ ದೇವಸ್ಥಾನ ಹಾಗೂ ಮುಟ್ಟು ರಾಕ್ ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಗೊಳಿಸಲು ಗುರುತಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ರೂ.5.75 ಕೋಟಿ ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟದ ಅಭಿವೃದ್ಧಿ

ಪುರಾಣ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟ ಕ್ಷೇತ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ವೀಕ್ಷಣಾ ಗೋಪುರಗಳು, ದಾಸೋಹ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರೂ.5.75 ಕೋಟಿ ವೆಚ್ಚದಲ್ಲಿ ವಿವರವಾದ ಪರಿಕಲ್ಪನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಕೊಳ್ಳೇಗಾಲದ ಶಾಸಕ ಕೃಷ್ಣಮೂರ್ತಿ.ಎ.ಆರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಬಿಳಿಗಿರಿ ರಂಗನಬೆಟ್ಟದ ದೇವಾಲಯದ ಸುತ್ತ ರೂ.1 ಕೋಟಿ ವೆಚ್ಚದಲ್ಲಿ ನೆಲಹಾಸು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ರೂ.1.74 ಕೋಟಿ ವೆಚ್ಚದಲ್ಲಿ ದೇವಾಲಯದ ಬಳಿ ಮೆಟ್ಟಿಲು ಹಾಗೂ ರೈಲಿಂಗ್ಸ್ ನಿರ್ಮಾಣ, ಕಲ್ಯಾಣಿ ರಸ್ತೆ ಮತ್ತು ರಥದ ಬೀದಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ದೇವಸ್ತಾನದ ಪಾದುಕೆಯಿಂದ ರಾಜಗೋಪುರಕ್ಕೆ ಕಾಲಂಗಳೊAದಿಗೆ ಮೆಟ್ಟಿಲುಗಳ ವಿನ್ಯಾಸ ಮಾಡುವಲ್ಲಿ ದೊಡ್ಡ ಬಂಡೆಗಳು ಕಂಡು ಬಂದ ಕಾರಣ ಕಾಮಗಾರಿ ಮರುವಿನ್ಯಾಸವನ್ನು ಲೋಕೋಪಯೋಗಿ ಇಲಾಖೆಯಿಂದ ಸಿದ್ಧಪಡಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಭರವಸೆ ನೀಡಿದರು.

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

12/03/2026 8:54 AM1 Min Read

World Kidney Day 2026 : `ಕಿಡ್ನಿ’ ಆರೋಗ್ಯವಾಗಿರಲು ಈ 7 ಆಹಾರಗಳನ್ನು ಪ್ರತಿದಿನ ಸೇವಿಸಿ !

12/03/2026 8:24 AM2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ : ಕುಡಿದ ಮತ್ತಿನಲ್ಲಿ ಅಣ್ಣ, ತಂಗಿಯನ್ನೇ ಕೊಂದ ಪಾಪಿ !

12/03/2026 8:07 AM1 Min Read
Recent News

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

12/03/2026 8:54 AM

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಕ್ಕೆ ಗೆಲುವು? ಅಧ್ಯಕ್ಷ ಟ್ರಂಪ್ ಸಂಭ್ರಮದ ನಡುವೆಯೇ ಹೆಚ್ಚಾದ ಕ್ಷಿಪಣಿ ದಾಳಿ!

12/03/2026 8:46 AM

World Kidney Day 2026 : `ಕಿಡ್ನಿ’ ಆರೋಗ್ಯವಾಗಿರಲು ಈ 7 ಆಹಾರಗಳನ್ನು ಪ್ರತಿದಿನ ಸೇವಿಸಿ !

12/03/2026 8:24 AM

ಎಲ್‌ಪಿಜಿ ಕಾಳಸಂತೆಕೋರರಿಗೆ ಶಾಕ್: ಸಿಲಿಂಡರ್ ದಾಸ್ತಾನು ಮತ್ತು ಅಕ್ರಮ ಮಾರಾಟದ ಮೇಲೆ ರಾಜ್ಯ ಸರ್ಕಾರಗಳ ಕಣ್ಗಾವಲು!

12/03/2026 8:20 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

By kannadanewsnow5712/03/2026 8:54 AM KARNATAKA 1 Min Read

ಬೆಂಗಳೂರು : ಶಾಲಾ ವರ್ಗಾವಣೆ ಪ್ರಮಾಣಪತ್ರ (Transfer Certificate – TC) ವಿದ್ಯಾರ್ಥಿಯ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ದಾಖಲೆಗಳಲ್ಲೊಂದು.…

World Kidney Day 2026 : `ಕಿಡ್ನಿ’ ಆರೋಗ್ಯವಾಗಿರಲು ಈ 7 ಆಹಾರಗಳನ್ನು ಪ್ರತಿದಿನ ಸೇವಿಸಿ !

12/03/2026 8:24 AM

SHOCKING : ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ : ಕುಡಿದ ಮತ್ತಿನಲ್ಲಿ ಅಣ್ಣ, ತಂಗಿಯನ್ನೇ ಕೊಂದ ಪಾಪಿ !

12/03/2026 8:07 AM

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ‘ಫ್ರೀಡಂ ಪಾರ್ಕ್’ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬಂದ್ !

12/03/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.