ಕಲಬುರಗಿ : ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಹಾಗೂ ರೈತರಿಗೆ 24 ಗಂಟೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಜನ ಸಂಕಲ್ಪ ಎಂದು ಬಿಜೆಪಿ ಸರ್ಕಾರ ಜಾತಿ ಧರ್ಮಗಳ ರ್ಯಾಲಿ ಮಾಡುವ ಮೂಲಕ ಸರ್ಕಾರ ಏನು ಮಾಡಲು ಹೊರಟಿಸಿದೆ ಎಂಬುದು ಅರ್ಥವಾಗುತ್ತಿಲ್ಲ, ಇನ್ನೊಂದು ಕಡೆ ಕಾಂಗ್ರೆಸ್ ಭಾರತ ಜೋಡು ಪಾದಯಾತ್ರೆ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದರು. ಈ ಎರಡು ಪಕ್ಷಳಿಂದ ಜನರಿಗೆ ಯಾವುದೇ ಉಪಯೋಗ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಹಾಗೂ ರೈತರಿಗೆ 24 ಗಂಟೆ ಉಚಿತ ವಿದ್ಯುತ್ ನೀಡಲಾಗುತ್ತದೆ, ಜೆಡಿಎಸ್ ಬಹುಮತದೊಂದಿಗೆ ಗೆದ್ದು ಕುಮಾರಸ್ವಾಮಿ ಅಧಿಕಾರಕ್ಕೆ ಬರಲಿದ್ದಾರೆ ಎಂದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚೆಗೆ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ ಕೂಡ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ ಎಂದು ಘೋಷಿಸಿದ್ದರು, ಈ ಬೆನ್ನಲ್ಲೇ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಕೂಡ ಭರವಸೆ ನೀಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಕುಮಾರಸ್ವಾಮಿ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು ಆರಂಭಿಸಿದ್ದೇವೆ. ಬದಲಾವಣೆ ತರಲು ಪ್ರಾಮಾಣಕ ಹೋರಾಟಕ್ಕೆ ಮುಂದಾಗಿದ್ದೇನೆ , ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ ಎಂದಿದ್ದರು. ಶೈಕ್ಷಣಿಕ ಪ್ರಗತಿಯನ್ನು ರಾಜ್ಯದಲ್ಲಿ ಸಾಧಿಸೋ ಸಲುವಾಗಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಾಲೆಗಳನ್ನು ಸ್ಥಾಪನೆ ಮಾಡುವಂತ ಗುರಿಯನ್ನು ಹೊಂದಿದ್ದೇನೆ. ಸ್ತ್ರೀಶಕ್ತಿ ಸಂಘಗಳಿಗೆ ನೆರವಾಗೋ ನಿಟ್ಟಿನಲ್ಲಿ ನಮ್ಮ ಸರ್ಕಾರ ಬಂದರೇ 24 ಗಂಟೆಯಲ್ಲೇ ಸಾಲಮನ್ನಾ ಮಾಡಲಾಗುತ್ತದೆ ಎಂದು ಘೋಷಿಸಿದ್ದರು.