ಬೆಳಗಾವಿ : ರಾಜ್ಯದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ಯೋಜನೆಗೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 2400 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ( Basavaraj Bommai ) ಹೇಳಿದರು.
ಇಂದು ಕಲಾಪದ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ಯೋಜನೆಗೆ 2105 ಕೋಟಿ ರೂ ರೂ ಮಂಜೂರು ಮಾಡಲಾಗಿದೆ, ಇದರಲ್ಲಿ 2,047 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದರು. ಪ್ರಮುಖ ಯಾತ್ರಾ ಸ್ಥಳದಲ್ಲಿ ಮೂಲ ಸೌಕರ್ಯ ಅಭಿವೃದ್ದಿ ಹಾಗೂ ದೇವಾಲಯ ದುರಸ್ತಿ , ಜೀರ್ಣೋದ್ದಾರ ಸೇರಿ 88.75 ಕೋಟಿ ರೂ ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ನಿವೃತ್ತ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸುವ ಬಗ್ಗೆ ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ, ರಾಜಸ್ಥಾನ, ಛತ್ತೀಸ್ಘಡ ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿಯನ್ನೇ ಮುಂದುವರೆಸಿದ್ದಾರೆ , ಅಂತಿಮವಾಗಿ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.
BIGG NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ
WATCH VIDEO: ಆಂಬ್ಯುಲೆನ್ಸ್ ನಿಲ್ಲಿಸಿ ರೋಗಿಗೆ ಕುಡಿಯಲು ಮದ್ಯ ನೀಡಿದ ಡ್ರೈವರ್…! ಮುಂದೆನಾಯ್ತು? ಈ ವಿಡಿಯೋ ನೋಡಿ